ವಿಜಯನಗರ : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಅವರ ಸ್ಟೈರ್ ಕಾರಿಗೆ ಬೆಂಗಾಗಲು ಪಡೆ ವಾಹನ ಡಿಕ್ಕಿ ಹೊಡೆದಿರುವ ವಿಜಯನಗರ ಜಿಲ್ಲೆಯ ಕಾನಹೊಸಳ್ಳಿ ಬಳಿ ನಡೆದಿದೆ. ಆದರೆ ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಹೊಸಹಳ್ಳಿಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೆಂಗಾವಲು ಪಡೆಯ ಎ ಎಸ್ ಐ ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳಕ್ಕೆ ಕೂಡ್ಲಿಗಿ ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.