ಬೆಂಗಳೂರು : ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿಗೆ ಲೋಕಾಯಕ್ತು ಅಧಿಕಾರಿಗಳು ಶಾಕ್ ನೀಡಿದ್ದು, ಬೆಂಗಳೂರಿನ 10 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸಚಿವ ಆಪ್ತ ಕಾರ್ಯದರ್ಶಿ ಸರ್ದಾರ್ ಸರ್ಫರಾಜ್ ಖಾನ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಹಲಸೂರು ನಿವಾಸ ಸೇರಿದಂತೆ 10 ಕಡೆ ದಾಳಿ ನಡೆಸಲಾಗಿದೆ.
ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಲೋಕಾಯುಕ್ತ ದಾಳಿ ನಡೆಸಲಾಗಿದೆ. ವಸತಿ ಇಲಾಖೆಗೆ ನಿಯೋಜನೆಗೊಂಡಿರುವ ಸರ್ಫರಾಜ್ ಗೆ ಸೇರಿದ ನಿವಾಸಗಳ ಮೇಲೆ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಬೆಂಗಳೂರಿನ 7 ಮನೆ, ಕೊಡಗಿನಲ್ಲಿ 2 ಕಾಫಿ ಎಸ್ಟೇಟ್, ಹೆಚ್.ಡಿ.ಕೋಟೆಯ ಒಂದು ರೆಸಾರ್ಟ್ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ.








