ಅಸ್ಸಾಂ : ಇಂದು ನಸುಕಿನ ಜಾವ ತ್ರಿಪುರ ಹಾಗೂ ಅಸ್ಸಾಂನಲ್ಲಿ ಲಘು ಭೂಕಂಪನ ಸಂಭವಿಸಿದ್ದು, ತ್ರಿಪುರದ ಗೋಮತಿಯಲ್ಲಿ ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 3.9ರಷ್ಟು ದಾಖಲಾಗಿದೆ. ಅಲ್ಲದೆ ಅಸ್ಸಾಂನ ಮೋರಿಗಾವ್ನಲ್ಲೂ ಕೂಡ ಮುಂಜಾನೆ ಭೂಮಿ ಕಂಪಿಸಿದ ಅನುಭವ ಆಗಿದ್ದು ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 5.1 ರಷ್ಟು ದಾಖಲಾಗಿದೆ. ಇಲ್ಲಿಯವರೆಗೆ ಯಾವುದೇ ಹಾನಿ ಅಥವಾ ಗಾಯಗಳ ವರದಿಯಾಗಿಲ್ಲ.
ಅಸ್ಸಾಂನಲ್ಲಿ ಭೂಕಂಪ ಸಂಭವಿಸುವ ಕೆಲವು ಗಂಟೆಗಳ ಮೊದಲು , ಸೋಮವಾರ ಬೆಳಗಿನ ಜಾವ 3:30 ರ ಸುಮಾರಿಗೆ ತ್ರಿಪುರದ ಗೋಮತಿಯಲ್ಲಿ ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆಯ ಭೂಕಂಪ ಸಂಭವಿಸಿತ್ತು. ಅಸ್ಸಾಂನಲ್ಲಿ ಭೂಕಂಪ ಸಂಭವಿಸುವ ಕೆಲವು ಗಂಟೆಗಳ ಮೊದಲು , ಸೋಮವಾರ ಬೆಳಗಿನ ಜಾವ 3:30 ರ ಸುಮಾರಿಗೆ ತ್ರಿಪುರದ ಗೋಮತಿಯಲ್ಲಿ ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆಯ ಭೂಕಂಪ ಸಂಭವಿಸಿತ್ತು. ಭೂಕಂಪದಿಂದಾಗಿ ಯಾವುದೇ ರೀತಿಯ ಜೀವಹಾನಿ ಅಥವಾ ಹಾನಿ ಸಂಭವಿಸಿದ ಬಗ್ಗೆ ತಕ್ಷಣದ ವರದಿಗಳು ಬಂದಿಲ್ಲ.








