ಹಾಸನ : ನಿನ್ನೆ ತಾನೇ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಎರಡನೇ ತರಗತಿ ವಿದ್ಯಾರ್ಥಿನಿಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿದ್ದ ಘಟನೆ ನಡೆದಿತ್ತು. ಇದೀಗ ಹಾಸನದಲ್ಲಿ ಚಾಕ್ಲೇಟ್ ಕೊಡಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಕಾಮುಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದ್ದು ಸದ್ಯ ಆರೋಪಿಯನ್ನು ಪೊಲೀಸರು ಆಯ್ಕೆ ಪಡೆದುಕೊಂಡಿದ್ದಾರೆ.
ಹೌದು ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಈ ಒಂದು ಘಟನೆ ನಡೆದಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ. ಕಾಮುಕ ಕೃಷ್ಣ ಎನ್ನುವ ಆರೋಪಿ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದುಬಂದಿದೆ.
ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಈ ಒಂದು ಘಟನೆ ನಡೆದಿದೆ ಸಂಬಂಧಿಕರ ಮದುವೆಗೆ ಪೋಷಕರು ತೆರಳಿದ್ದರು. ಈ ಸಂದರ್ಭದಲ್ಲಿ ಚಾಕ್ಲೆಟ್ ಕೊಡುವ ನೆಪದಲ್ಲಿ ಕೀಚಕ ಕೃಷ್ಣ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ.ಹಳೇಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.