ಬೆಂಗಳೂರು :  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಅರ್ಚಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಡೆದಿದೆ. 

ಹೊಸಕೋಟೆ ನಗರದ ಕಣ್ಣೂರಿನಲ್ಲಿ ಈ ಘಟನೆ ನಡೆದಿದ್ದು, ಆಂಜನೇಯ ಸ್ವಾಮಿ ದೇಗುಲದಲ್ಲಿ ಅರ್ಚಕರಾಗಿರುವ ಆನಂದ್‌ ಪೂಜೆ ಮುಗಿಸಿಕೊಂಡು ವಾಪಸ್‌ ಬರುವಾಗಿ ರಸ್ತೆಯಲ್ಲಿ ಅಡ್ಡ ಹಾಕಿದ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ಸದ್ಯ ಗಾಯಾಳು ಅರ್ಚಕ ಆನಂದ್‌ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೊಸಕೋಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share.
Exit mobile version