ಚಿಕ್ಕಮಗಳೂರು : ನಿನ್ನೆ ರಾತ್ರಿ ಚಿಕ್ಕಮಂಗಳೂರಿನಲ್ಲಿ ಕಿಡಿಗೇಡಿಗಳು ಘೋಷಣೆ ಕೂಗಿ ಹಿಂದೂ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿ, ಮನೆಯ ಕಿಟಕಿ ಮತ್ತು ಗಾಜುಗಳನ್ನು ಹೊಡೆದು ಹಾಕಿರುವ ಘಟನೆ ನಡೆದಿದೆ.
ಹೌದು ಚಿಕ್ಕಮಗಳೂರಿನ ಮಹೇಶ್ ಎಂಬುವರ ಮನೆ ಮೇಲೆ ತಡರಾತ್ರಿ ಕಲ್ಲು ತೂರಲಾಗಿದೆ. ಕಲ್ಲು ತೂರಾಟ ನಡೆಸಿ, ಘೋಷಣೆ ಕೂಗಿ ಯುವಕರು ಪರಾರಿಯಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಮನೆ ಮಾಲೀಕರು ತಕ್ಷಣ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಸವನಹಳ್ಳಿ ಪೊಲೀಸರು ಕಿಡಿಗೇಡಿಗಳನ್ನು ಪತ್ತೆ ಹಚ್ಚಲು ಮುಂದಾಗಿದ್ದಾರೆ.
ರಾತ್ರಿ ಮನೆಯ ಮೇಲೆ ಕಲ್ಲು ಎಸೆದಿದ್ದು ಮನೆಯ ಕಿಟಕಿಯ ಗಾಜು ಒಡೆದಿದ್ದಾರೆ. ಮನೆ ಮೇಲೆ ಕಲ್ಲು ಎಸೆದು ಕಿಡಿಗೇಡಿಗಳು ಪರಾರಿಯಾಗಿದ್ದಾರೆ ಈ ಕುರಿತು ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಪತ್ತೆಹಚ್ಚಲಾಗುತ್ತದೆ ಎಂದು ಚಿಕ್ಕಮಂಗಳೂರು ಎಸ್ಪಿ ವಿಕ್ರಮ್ ಆಮ್ಟೆ ತಿಳಿಸಿದ್ದಾರೆ.
ಇನ್ನು ಬಾಡಿಗೆದಾರ ಉಮೇಶ್ ಎನ್ನುವವರು ಮಾತನಾಡಿ,ರಾತ್ರಿ 10 ರಿಂದ 12 ಗಂಟೆಗೆ ಕಲ್ಲು ಎಸೆದಿದ್ದಾರೆ. ನಾನು ಮನೆಯಿಂದ ಹೊರಗಡೆ ಬಂದಾಗ ಕಿಡಿಗೇಡಿಗಳು ಓಡಿ ಹೋಗಿದ್ದಾರೆ ಸುಮಾರು 5ರಿಂದ 8 ಜನರ ಗುಂಪು ಮನೆಗೆ ಕಲ್ಲು ಎಸೆದು ಓಡಿ ಹೋಗಿದೆ. ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದರ ಕುರಿತು ಪೊಲೀಸರಿಗೆ ದೂರು ನೀಡಿದ್ದೇನೆ. ಕರೆ ಮಾಡಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಬಂದಿದ್ದರು ಎಂದು ಬಾಡಿಗೆದಾರ ಉಮೇಶ್ ತಿಳಿಸಿದರು.