ಹೈದ್ರಾಬಾದ್ : ಆಂಧ್ರಪ್ರದೇಶದ ಹೈದರಾಬಾದ್ ನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಕೆಎಸ್ಆರ್ಟಿಸಿ ಸಂಸ್ಥೆಯ ಐರಾವತ ಬಸ್ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಸಿರುವ ಘಟನೆ ಹೈದರಾಬಾದ್ ಸಮೀಪದ ಶಂಶಾಬಾದ್ ನಲ್ಲಿ ನಡೆದಿದೆ.
ಹೌದು ಈ ಒಂದು ಘಟನೆ ಕಳೆದ ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಸಂಭವಿಸಿದೆ. ಕೇವಲ ರಾಜ್ಯದ ಕೆಎಸ್ಆರ್ಟಿಸಿ ಬಸ್ ಅಲ್ಲದೆ ತೆಲಂಗಾಣದ ಒಂದು ಸರ್ಕಾರಿ ಬಸ್, ಖಾಸಗಿ ಬಸ್ ಸೇರಿದಂತೆ ಒಟ್ಟು 4 ಬಸ್ಗಳ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದಾರೆ. ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಈ ವೇಳೆ ಯಾರಿಗೂ ಅಪಾಯ ಆಗಿಲ್ಲ. ಬಸ್ಸಿನ ಕಿಡಕಿಯ ಗಾಜುಗಳು ಒಡೆದು ಹೋಗಿವೆ.
ಹೈದರಾಬಾದ್ನಿಂದ ಬೆಂಗಳೂರು ನಡುವೆ ಸಂಚರಿಸುತ್ತಿದ್ದ ಸಾರಿಗೆ ಬಸ್ ಮೇಲೆ ದಾಳಿ ನಡೆದಿದೆ.ರಾತ್ರಿ 10:45ರ ಸುಮಾರಿನಲ್ಲಿ ಹೈದರಾಬಾದ್ನಿಂದ ಸಾರಿಗೆ ಬಸ್ ಬೆಂಗಳೂರಿನತ್ತ ಹೊರಟಿತ್ತು. ಈ ವೇಳೆ ಹೈದರಬಾದ್ನ ಶಂಶಾಬಾದ್ ಬಳಿ ಕಲ್ಲು ತೂರಾಟ ನಡೆಸಲಾಗಿದೆ. ಇದರಿಂದ ಬಸ್ಸಿನ ಕಿಟಕಿ ಗಾಜಿಗೆ ಹಾನಿಯಾಗಿದೆ. ಅದೃಷ್ಟವಶಾತ್ ಪ್ರಯಾಣಿಕರಿಗೆ ಯಾವುದೇ ಅಪಾಯವಾಗಿಲ್ಲ.ಈ ಸಂಬಂಧ ಶಂಶಾಬಾದ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.