ಬೆಂಗಳೂರು : ಬೆಂಗಳೂರಿನಲ್ಲಿ ಗ್ರಾಮಪಂಚಾಯಿತಿ ಸದಸ್ಯರೊಬ್ಬರ ಮನೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
ಬೆಂಗಳೂರಿನ ಆವಲಹಳ್ಳಿಯಲ್ಲಿ ಸೋಮವಾರ ರಾತ್ರಿ ಕಿಡಿಗೇಡಿಗಳು ಬಿದರಹಳ್ಳಿ ಗ್ರಾಮಪಂಚಾಯಿತಿ ಸದಸ್ಯ ಜಗನ್ನಾಥ್ ಮನೆಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಮನೆಯಲ್ಲಿದ್ದ ಕುಟುಂಬಸ್ಥರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಭಸ್ಮವಾಗಿದೆ.
ಘಟನಾ ಸ್ಥಳಕ್ಕೆ ಆವಲಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.