ಬೆಳಗಾವಿ : ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಿಡಿಗೇಡಿಗಳು ಮಸಿ ಬಳಿದಿದ್ದು, ಸ್ಥಳದಲ್ಲಿ ಕನ್ನಡ ಪರ ಹೋರಾಟಗಾರರು ಜಮಾಯಿಸಿದ್ದಾರೆ.
ಬೆಳಗಾವಿಯ ಮೆಚ್ಚೆ ಗ್ರಾಮದಲ್ಲಿ ಕಿಡಿಗೇಡಿಗಳು ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಮಸಿ ಬಳೆದಿರುವ ಘಟನೆ ನಡೆದಿದೆ. ಸ್ಥಳದಲ್ಲಿ ಕನ್ನಡಪರ ಹೋರಾಟಗಾರರು ಜಮಾಯಿಸಿದ್ದು, ಸ್ಥಳಕ್ಕೆ ಪಲೀಸ್ ಕಮಿಷನರ್ ಭೂಷಣ್ ಬೊರಸೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೂಡಲೇ ಕಿಡಿಗೇಡಿಗಳನ್ನು ಬಂಧಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಸದ್ಯ ಪ್ರಕರಣ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ.








