ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಕಿಡಿಗೇಡಿಗಳು ದತ್ತಾತ್ರೇಯ ದೇವರ ಮೂರ್ತಿಯನ್ನು ಭಗ್ನಗೊಳಿಸಿರುವ ಘಟನೆ ನಡೆದಿದೆ.
ಹುಬ್ಬಳ್ಳಿಯ ಅಪಾರ್ಣ ಅಪಾರ್ಟ್ ಮೆಂಟ್ ನಲ್ಲಿರುವ ದತ್ತಾತ್ರೇಯ ದೇವಸ್ಥಾನದಲ್ಲಿ ದೇವರ ಮೂರ್ತಿಯನ್ನು ಕಿಡಿಗೇಡಿಗಳು ಭಗ್ನಗೊಳಿಸಿದ್ದಾರೆ. ಬೆಳಗ್ಗೆ ಪೂಜೆ ಮಾಡಲು ದೇವಸ್ಥಾನಕ್ಕೆ ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ.
ದೇವಸ್ಥಾನದಲ್ಲಿರುವ ದೇವರ ಮೂರ್ತಿಯ 4 ಕೈಗಳನ್ನು ಕತ್ತರಿಸಿ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. ಸ್ಥಳೀಯರು ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.