ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ಶಾಸಕ ಮುನಿರತ್ನಗೆ ಕೋರ್ಟ್ ಶಾಕ್ ನೀಡಿದ್ದು, ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 23 ಕ್ಕೆ ಮುಂದೂಡಿದೆ.
ಶಾಸಕ ಮುನಿರತ್ನ ಅವರು ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಇಂದು ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ಕೋರ್ಟ್ ಅರ್ಜಿ ವಿಚಾರಣೆ ವಿಚಾರಣೆ ನಡೆಸಿದ್ದು, ವಿಚಾರಣೆಯನ್ನು ಸೆಪ್ಟೆಂಬರ್ 23 ಕ್ಕೆ ಮುಂದೂಡಿದೆ. ಈ ಮೂಲಕ ಶಾಸಕ ಮುನಿರತ್ನಗೆ ಜೈಲೇ ಗತಿ ಆಗಿದೆ.
2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್ಮೇಲ್ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ರಾಮನಗರ ಜಿಲ್ಲೆಯ ಕಗ್ಗಲಿಪುರ ಠಾಣೆ ಪೋಲೀಸರು ಬಿಜೆಪಿ ಶಾಸಕ ಮುನಿರತ್ನ ಅವರನ್ನು ಮತ್ತೆ ಬಂಧಿಸಿದ್ದಾರೆ.