ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರದ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಿದ್ದು, ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಜಾಮೀನು ನೀಡಿದ್ದು,ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಆಗಿದ್ದಾರೆ.
ಬೆಂಗಳೂರು ಮೂಲದ ಮಹಿಳೆಯೊಬ್ಬರು ಶಾಸಕ ಮುನಿರತ್ನ ವಿರುದ್ಧ ರಾಮನಗರ ಜಿಲ್ಲೆಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ನನ್ನನ್ನು ಹೆದರಿಸಿ ಬೆದರಿಸಿ ಅತ್ಯಾಚಾರ ಎಸಿಗಿದ್ದು ಅಲ್ಲದೆ ನನ್ನನ್ನು ಬಳಸಿಕೊಂಡು ಹನಿ ಟ್ರ್ಯಾಪ್ ಗೆ ಮುಂದಾಗಿದ್ದರು ಎಂದು ಆರೋಪಿಸಿ ದೂರು ನೀಡಿದರು ಈ ಹಿನ್ನೆಲೆಯಲ್ಲಿ ಅವರನ್ನು ಅರೆಸ್ಟ್ ಮಾಡಲಾಗಿತ್ತು. ಇದೀಗ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಇಂದು ಅವರು ಜೈಲಿನಿಂದ ಬಿಡುಗಡೆ ಆಗಿದ್ದಾರೆ.
ಇದಕ್ಕೂ ಮುನ್ನ ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿರತ್ನ ಅವರನ್ನು ಬಂಧಿಸಲಾಗಿತ್ತು. . ಬಳಿಕ ಬಿಡುಗಡೆಯಾದ ನಂತರ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಪೊಲೀಸರು ಅವರನ್ನು ಅರೆಸ್ಟ್ ಮಾಡಿದರು. ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅವರಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.