ಬೆಂಗಳೂರು : ಶಾಸಕ ನರೇಂದ್ರ ಸ್ವಾಮಿ ಅವರನ್ನು ಕರ್ನಾಟಕ ರಾಜ್ಯ ಮಾಲೀನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪಿ.ಎಂ. ನರೇಂದ್ರ ಸ್ವಾಮಿ ಶಾಸಕರು, ಮಳವಳ್ಳಿ ವಿಧಾನಸಭಾ ಕ್ಷೇತ್ರ, ನಂ-305, ಪೂರಿಗಾಲಿ, ಮಳವಳ್ಳಿ ತಾಲ್ಲೂಕು, ಮಂಡ್ಯ ಜಿಲ್ಲೆ ಇವರನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ ಇ-ಎಫ್ ಸಿಸಿ 545 ಇಪಿಸಿ 2024 ದಿನಾಂಕ 05.02.2025ರಂದು ಕರ್ನಾಟಕ ರಾಜ್ಯ ಮಾಲೀನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶಿಸಲಾಗಿದ್ದು, ಅದೇ ದಿನಾಂಕದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸದರಿ ಮಾನ್ಯರಿಗೆ ಸಂಪುಟ ದರ್ಜೆ ಸಚಿವ ಸ್ಥಾನಮಾನದೊಂದಿಗೆ ಸಂಪುಟ ದರ್ಜೆ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ನೀಡಿ ಆದೇಶಿಸಿದೆ.