ಬೆಲಗಾವಿ : ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಶಾಸಕ ರಾಜು ಕಾಗೆಯವರ ಹಿರಿಯ ಪುತ್ರಿ ಕೃತಿಕಾ ಅವರು ಚಿಕಿತ್ಸೆ ಫಲಿಸದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಹಲವು ವರ್ಷಗಳಿಂದ ಹೃದಯ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಪಲಕಾರಿಯಾಗದೆ ಶನಿವಾರ ಇಹಲೋಕ ತ್ಯಜಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇಂದು ಬೆಳಗ್ಗೆ 10 ಗಂಟೆಗೆ ಕಾಗವಾಡ ಶಾಸಕ ರಾಜು ಕಾಗೆ ಅವರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಪಟ್ಟಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.