ಬೆಂಗಳೂರು : ಸದನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತು ಅಶ್ಲೀಲ ಪದ ಬಳಸಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರನ್ನು ಬೆಳಗಾವಿಯ ಹಿರೇಬಾಗೇವಾಡಿ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದರು. ಇದೀಗ ಈ ಒಂದು ಬಂಧನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಂಎಲ್ಸಿ ಸಿಟಿ ರವಿ ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಇಮೇಲ್ ಮುಖಾಂತರ ಸುಮಾರು 13 ಪುಟಗಳ ದೂರು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಹೌದು ಕಳೆದ ಡಿಸೆಂಬರ್ ನಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಕಲಾಪದ ಸಂದರ್ಭದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತು ಬಿಜೆಪಿ ಎಂಎಲ್ಸಿ ಸಿಟಿ ರವಿ ಪ್ರಸ್ಟಿಟ್ಯೂಟ್ ಎಂದು ಅಶ್ಲೀಲವಾಗಿ ಕರೆದಿದ್ದರು. ಇದರಿಂದ ಮನನೊಂದ ಸಚಿವ ಲಕ್ಷ್ಮಿ ಹೆಬ್ಬಾಳಕರ್ ಅವರು ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಸಿಡಿ ರವಿ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಬಳಿಕ ಪೊಲೀಸರು ಸಿಟಿ ರವಿ ಅವರನ್ನು ಅರೆಸ್ಟ್ ಮಾಡಿದ್ದರು.
ಅರೆಸ್ಟ್ ಮಾಡಿದ ಬಳಿಕ ಬೆಳಗಾವಿ ಬಾಗಲಕೋಟೆ ಸೇರಿದಂತೆ ಮೂರು ಜಿಲ್ಲೆಗಳನ್ನು ಸುತ್ತಾಡಿಸಿ, ಮರುದಿನ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಲಯವು ಸಿಟಿ ರವಿ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಇದೀಗ ಅರೆಸ್ಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಸಿಟಿ ರವಿ ದೂರು ನೀಡಿದ್ದಾರೆ. ಇಮೇಲ್ ಮುಖಾಂತರ ಸುಮಾರು 13 ಪುಟಗಳ ದೂರು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ದೂರಿನಲ್ಲಿ ಏನಿದೆ?
ಬಂಧನದ ವೇಳೆ ಪೊಲೀಸ್ ದೌರ್ಜನ್ಯ, ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದು, ದೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಸಚಿವರುಗಳು ಹಾಗೂ ಪೊಲೀಸ್ ಅಧಿಕಾರಿಗಳ ಹೆಸರುಗಳನ್ನು ಕೂಡ ಸಿಟಿ ರವಿ ಅವರು ಉಲ್ಲೇಖಿಸಿದ್ದಾರೆ. ಡಿಜಿಪಿ ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಾಡಾ ಮಾರ್ಟಿನ್ ಬೆಳಗಾವಿಯ ಎಸ್ ಪಿ ಭೀಮಾ ಶಂಕರ್ ಗುಳೇದ್, ಡಿಸಿಎಂ ಡಿಕೆ ಶಿವಕುಮಾರ್ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಹೆಸರನ್ನು ಉಲ್ಲೆಖಿಸಿದ್ದಾರೆ.
ಅಲ್ಲದೇ ಎಂಎಲ್ಸಿ ಗಳಾದಂತಹ ಚನ್ನರಾಜ ಹಟ್ಟಿಹೊಳಿ, ಬಸನಗೌಡ ಬಾದರ್ಲಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆಯ ಕಾರ್ಯದರ್ಶಿ ಮತ್ತು ಅವರ ಪಿಎ ಗಳ ಒಳಗೊಳ್ಳುವಿಕೆ ಬಗ್ಗೆ ದೂರು ನೀಡಿದ್ದಾರೆ. ಬಾಗೇವಾಡಿ ಸಿಪಿಐ ರಾಜು ಪಾಟೀಲ್ ಹೆಸರು ಕೂಡ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಗೃಹ ಸಚಿವ ಜಿ ಪರಮೇಶ್ವರ್ ಮುಖ್ಯ ಕಾರ್ಯದರ್ಶಿ ಗೃಹ ಇಲಾಖೆಯ ಕಾರ್ಯದರ್ಶಿ ದೌರ್ಜನ್ಯ ತಡೆಯುವಲ್ಲಿ ವಿಫಲರಾಗಿದ್ದಾರೆ. ಎಂದು ಸಿಟಿ ರವಿ ಆರೋಪಿಸಿದ್ದಾರೆ. ಪೊಲೀಸ್ ಅಧಿಕಾರಿಗಳ ವಿರುದ್ಧ ಬಿಜೆಪಿ ಕ್ರಮ ಕೈಗೊಂಡಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.