ಹಾಸನ : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಂಎಲ್ಸಿ ಸೂರಜ್ ರೇವಣ್ಣ ವಿರುದ್ಧ ಹಾಸನ ಜಿಲ್ಲೆಯ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಮತ್ತೊಂದು FiR ದಾಖಲಾಗಿದೆ. ಅಸಹಜ ಲೈಂಗಿಕ ದೌರ್ಜನ್ಯ ಆರೋಪದಡಿ ಮತ್ತೊಂದು FIR ದಾಖಲಾಗಿದೆ.
ಹೊಳೆನರಸೀಪುರ ಮೂಲದ ಯುವಕನಿಂದ ಈ ಒಂದು ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ. 3 ವರ್ಷಗಳ ಹಿಂದೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಯುವಕ ದೂರನ್ನು ಸಲ್ಲಿಸಿದ್ದಾನೆ. ಸಂತ್ರಸ್ತನ ದೂರನ್ನು ಆಧರಿಸಿ ಇದೀಗ ಪೊಲೀಸರು FIR ದಾಖಲಿಸಿಕೊಂಡಿದ್ದಾರೆ. ಐಪಿಸಿ ಸೆಕ್ಷನ್ 377, 342, 506 ಅಡಿ ಪ್ರಕರಣ ದಾಖಲಾಗಿದೆ.
ಹೌದು ಹೊಳೆನರಸೀಪುರ ಗ್ರಾಮಾಂತರ ಠಾಣೆಗೆ ಸಂತ್ರಸ್ತನಿಂದ ದೂರು ಸಲ್ಲಿಕೆಯಾಗಿದೆ. 4 ವರ್ಷಗಳ ಹಿಂದೆ ಕೋವಿಡ್ ಸಮಯದಲ್ಲಿ ಅಸಹಜ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂದು ಆರೋಪಿಸಿ ದೂರು ನೀಡಿದ್ದಾನೆ. ನಾಲ್ಕು ದಿನಗಳ ಹಿಂದೆ ಸೂರಜ್ ಪರವಾಗಿ ದೂರು ಕೊಟ್ಟಿದ್ದ ಯುವಕ ಇಂದು ಅದೇ ಯುವಕನಿಂದ ಸೂರಜ್ ರೇವಣ್ಣ ವಿರುದ್ಧವೇ ದೂರು ದಾಖಲಿಸಿದ್ದಾನೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ಮೂಲದ ಯುವಕನಿಂದ ದೂರು ದಾಖಲಾಗಿದೆ. 10 ಪುಟಗಳ ಸುದೀರ್ಘ ದೂರ ಬರೆದು ಠಾಣೆಗೆ ತಂದಿರುವ ಸಂತ್ರಸ್ತ ಸಂತ್ರಸ್ತನ ದೂರನ್ನು ಆಧರಿಸಿ ಪೊಲೀಸರು ಇದೀಗ ಕೇಸ್ ದಾಖಲಿಸಲು ಮುಂದಾಗಿದ್ದಾರೆ. ಜೂನ್ 22ರಂದು ಅರಕಲಗೂಡು ಮೂಲದ ಯುವಕ ದೂರು ನೀಡಿದ್ದ. ಜೆಡಿಎಸ್ MLC ಸೂರಜ್ ರೇವಣ್ಣ ವಿರುದ್ಧ ದೂರು ದಾಖಲಿಸಿದ್ದ. ಇಂದು ಹೊಳೆನರಸೀಪುರ ಮೂಲದ ಯುವಕನಿಂದ ಠಾಣೆಗೆ ದೂರು ಸಲ್ಲಿಕೆಯಾಗಿದೆ.