ಬೆಂಗಳೂರು : ಇಂದು ಮಧ್ಯಾಹ್ನ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಜಾತಿ ಗಣತಿ ವರದಿ ವಿಚಾರಕ್ಕೆ ಸಂಬಂಧಪಟ್ಟಂತೆ ಸಚಿವ ಸಂಪುಟ ಸಭೆ ನಡೆಯಲಿದೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ, ಈ ಒಂದು ಸಂಪುಟ ಸಭೆಯಲ್ಲಿ ರಾಜ್ಯದಲ್ಲಿ ಹೆಚ್ಚಿನ ಭದ್ರತೆಗಾಗಿ ಸಿಎಂ ಜೊತೆಗೆ ಚರ್ಚಿಸಲಾಗುತ್ತದೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದರು.
ಬೆಂಗಳೂರಿನಲ್ಲಿ ಮಾತನಾಡಿದ ಜಿ.ಪರಮೇಶ್ವರ್, ಭಾರತ ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಭಾರತದ ರಾಜ್ಯಗಳಿಗೆ ಕೊಟ್ಟ ಸೂಚನೆಗಳನ್ನೇ ನಮಗೂ ಕೇಂದ್ರ ಸರ್ಕಾರ ಕೊಟ್ಟಿದೆ. ಎಲ್ಲಾ ಜಿಲ್ಲೆಗಳ ಎಸ್ಪಿ ಗಳಿಗೆ ಮುನ್ನೆಚ್ಚರಿಕೆ ಸೂಚನೆ ಕೊಡಲಾಗಿದೆ. ಮಾಹಿತಿಗಳನ್ನು ಸಂಗ್ರಹಿಸಲು ತಿಳಿಸಲಾಗಿದೆ. ಸ್ಲೀಪರ್ ಸಲ್ಗಳ ಮೇಲು ನಿಗಾ ಇಡಲು ಸೂಚಿಸಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಹೆಚ್ಚುವರಿ ಭದ್ರತೆಯ ಬಗ್ಗೆ ಸಿಎಂ ಜೊತೆಗೆ ಚರ್ಚೆ ಮಾಡುತ್ತೇನೆ. ಸಂಪುಟ ಸಭೆಯಲ್ಲೂ ಭದ್ರತೆಯ ವಿಚಾರವನ್ನು ಪ್ರಸ್ತಾಪ ಮಾಡುತ್ತೇವೆ. ಪೊಲೀಸರಿಗೂ ಎಚ್ಚರಿಕೆ ವಹಿಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಜಲಾಶಯಗಳು ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು.