ಚಿಕ್ಕಮಗಳೂರು : ಚಿಕ್ಕಮಂಗಳೂರಿನಲ್ಲಿ ಇಂದು ಭೀಕರವಾದಂತಹ ಅಪಘಾತ ಸಂಭವಿಸಿದ್ದು ಕೂಲಿ ಕಾರ್ಮಿಕರನ್ನು ಹೊತ್ತು ತೆರಳುತ್ತಿದ್ದ ಟ್ರಾಕ್ಟರ್ ಒಂದು, ನಿಯಂತ್ರಣ ಕಳೆದುಕೊಂಡು 20 ಅಡಿ ಆಳಕ್ಕೆ ಬಿದ್ದ ಪರಿಣಾಮ, ಟ್ರ್ಯಾಕ್ಟರ್ ನಲ್ಲಿದ್ದ ಸುಮಾರು 40 ಕಾರ್ಮಿಕರ ಪೈಕಿ 10ಕ್ಕೂ ಹೆಚ್ಚು ಕೂಲಿ ಕಾರ್ಮಿಕರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಚಿಕ್ಕಮಂಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ತೀರ್ಥಕೆರೆ ಬಳಿ ಈ ಒಂದು ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಆಳಕ್ಕೆ ಟ್ರ್ಯಾಕ್ಟರ್ ಬಿದ್ದಿದೆ. ತೀರ್ಥಕೆರೆ ಸಮೀಪದ ಎಸ್ಟೇಟ್ ನಲ್ಲಿ ಕೂಲಿ ಕಾರ್ಮಿಕರು ಕೆಲಸಕ್ಕೆ ಇದ್ದರು. ಕೆಲಸ ಮುಗಿದ ಬಳಿಕ ದಿನಸಿ ಖರೀದಿಸಿ ಜಯಪುರದಿಂದ ಕಾರ್ಮಿಕರು ವಾಪಸ್ ಆಗುತ್ತಿದ್ದರು.
ಈ ವೇಳೆ ಅಸ್ಸಾಂ ಸೇರಿದಂತೆ ಸ್ಥಳೀಯ 40 ಕಾರ್ಮಿಕರನ್ನು ಹೊತ್ತು ಟ್ರ್ಯಾಕ್ಟರ್ ತೆರಳುತ್ತಿತ್ತು. ಈ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಈ ವೇಳೆ 10ಕ್ಕೂ ಹೆಚ್ಚು ಕೂಲಿ ಕಾರ್ಮಿಕರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಜಯಪುರ ಮತ್ತು ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಕುರಿತಂತೆ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ