ರಾಯಚೂರು : ವಸತಿ ನಿಲಯದಲ್ಲಿ ಬೆಳಿಗ್ಗೆ ನೀಡುವಂತಹ ಉಪಹಾರವನ್ನ ಸೇವಿಸಿ ಸುಮಾರು 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ರಾಯಚೂರು ಜಿಲ್ಲೆಯ ಅರಕೇರಾ ತಾಲೂಕಿನ ಆಲ್ಕೋಡ ಗ್ರಾಮದ ವಸತಿ ನಿಲಯವೊಂದರಲ್ಲಿ ನಡೆದಿದೆ.
ಹೌದು ಬೆಳಿಗ್ಗೆ ಉಪಹಾರ ಚಿತ್ರಾನ್ನ ಸೇವಿಸಿದ ವಿದ್ಯಾರ್ಥಿಗಳು ತಲೆ ಸುತ್ತು, ವಾಂತಿ ಹಾಗೂ ಆಯಾಸಕ್ಕೆ ಒಳಗಾಗಿದ್ದು, ವಿದ್ಯಾರ್ಥಿಗಳನ್ನು ಅರಕೇರಾ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ, ಚಿಕಿತ್ಸೆ ನೀಡಲಾಗಿದೆ. ಮುಂಜಾಗ್ರತಾ ದೃಷ್ಟಿಯಿಂದ ಅಸ್ವಸ್ಥ ವಿದ್ಯಾರ್ಥಿಗಳನ್ನು ದೇವದುರ್ಗದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಒಳಪಡಿಸಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ವಿದ್ಯಾರ್ಥಿಗಳ ಪೋಷಕರು ಆಸ್ಪತ್ರೆಗೆ ಆಗಮಿಸಿದ್ದು, ಸಹಜವಾಗಿ ಆತಂಕಕ್ಕೆ ಒಳಗಾಗಿದ್ದಾರೆ. ಈ ವೇಳೆ ಘಟನೆಯ ಕುರಿತು ಸತ್ಯಾಂಶ ಹೊರ ಬರಬೇಕಾದರೆ ಇಲಾಖೆಯ ಮಟ್ಟದಲ್ಲಿ ತನಿಖೆ ನಡೆಸಬೇಕು ಎಂದು ಪೋಷಕರು ಪಟ್ಟು ಹಿಡಿದಿದ್ದಾರೆ. ಘಟನೆ ಕುರಿತಂತೆ ಅರಕೇರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.