ಹಾಸನ : ಮಧ್ಯಾಹ್ನ ನೀಡುವ ಬಿಸಿಯೂಟದಲ್ಲಿ ಹಲ್ಲಿ ಬಿದ್ದ ಪರಿಣಾಮ ಸರ್ಕಾರಿ ಪ್ರೌಢಶಾಲೆಯ ಸುಮಾರು 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಗಿಮರೂರು ಎಂಬ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.
ಹೌದು ರಾಗಿಮರೂರು ಸರ್ಕಾರಿ ಪ್ರೌಢ ಶಾಲೆಯ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದೀಗ ಅಸ್ವಸ್ಥರಾಗಿದ್ದಾರೆ. ತಾಲೂಕಿನ ಕೋಣನೂರಿನ ಸಮುದಾಯ ಆರೋಗ್ಯ ಕೇಂದ್ರ ಮತ್ತು ಅರಕಲಗೂಡು ತಾಲೂಕು ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ಅಸ್ವಸ್ಥಗೊಂಡ 8 ಮಕ್ಕಳನ್ನು ಹಾಸನ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಹಲ್ಲಿ ಬಿದ್ದು ಕಳುಹಿಸಿತಗೊಂಡ ಆಹಾರವನ್ನು ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ವಾಂತಿಯಿಂದ ಬಳಲುತ್ತಿದ್ದವರನ್ನು ಶಿಕ್ಷಕರು ಆಸ್ಪತ್ರೆಗೆ ಕರೆತಂದು ದಾಖಲಿಸಿದ್ದಾರೆ.ಸುರಕ್ಷತಾ ಕ್ರಮ ವಹಿಸಿದ ಶಾಲಾ ಶಿಕ್ಷಕರ ವಿರುದ್ಧ ಇದೀಗ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಘಟನೆ ಕುರಿತಂತೆ ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.