ಚಿತ್ರದುರ್ಗ : ಇಟ್ಟಿಗೆ ತುಂಬಿದ ಟ್ಯಾಕ್ಟರ್ ಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ಅಲ್ಲಿದ್ದ ಸುಮಾರು 20 ಕ್ಕೂ ಹೆಚ್ಚು ಜನರಿಗೆ ಗಂಭೀರವಾದಂತ ಗಾಯಗಳಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚಿಕ್ಕಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 150 ರಲ್ಲಿ ಘಟನೆ ಸಂಭವಿಸಿದೆ.
ಮದುವೆ ಮುಗಿಸಿಕೊಂಡು ಮಾಗಡಿಗೆ ಹಿಂದಿರುಗುವಾಗ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು, ಗಾಯಾಳುಗಳನ್ನು ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಕುರಿತಂತೆ ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣವಾಗಿದೆ
ಹಣಕಾಸಿನ ವಿಚಾರಕ್ಕೆ ವ್ಯಕ್ತಿಯ ಬರ್ಬರ ಕೊಲೆ
ಹಣದ ವಿಷಯಕ್ಕೆ ಸಂಬಂಧಿಸಿದಂತೆ ಶ್ರೀನಿವಾಸ್ (28) ಎನ್ನುವ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಹೊಸ್ಕುರು ಎಂಬಲ್ಲಿ ಈ ಕೊಲೆ ನಡೆದಿದೆ. ಲಾಂಗ್ ನಿಂದ ಕೊಚ್ಚಿ ಶ್ರೀನಿವಾಸ್ ಎನ್ನುವ ವ್ಯಕ್ತಿಯನ್ನು ಭೀಕರವಾಗಿ ಹತ್ಯೆ ಗೈಯ್ಯಲಾಗಿದೆ.ಬೆಂಗಳೂರು ಉತ್ತರ ತಾಲೂಕಿನ ಹೊಸ್ಕುರು ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ.ಕೊಲೆಗೆ ಈಡಾದ ಶ್ರೀನಿವಾಸ್ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಿವಾಸಿ ಎಂದು ಹೇಳಲಾಗುತ್ತಿದ್ದು ಮಾದನಾಯಕನಹಳ್ಳಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ.