ಹಾವೇರಿ : ಹಾವೇರಿ ಜಿಲ್ಲೆಯ ಸವಣೂರಿನ ಬಳಿ ಎರಡು ಸರ್ಕಾರಿ ಬಸ್ ಗಳ ನಡುವೆ ಡಿಕ್ಕಿ ಸಂಭವಿಸಿದ್ದು, 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.
ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಯಲವಿಗಿ ಅಂಡರ್ ಪಾಸ್ ನಲ್ಲಿ ಎರಡು ಸರ್ಕಾರಿ ಬಸ್ ಗಳ ನಡುವೆ ಡಿಕ್ಕಿಯಾಗಿದ್ದು, 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಸವಣೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸವಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.