ಆಂಧ್ರಪ್ರದೇಶ : ಹೋಟೆಲ್ ನಲ್ಲಿ ಉಪಹಾರ ಸೇವಿಸಿದ 20ಕ್ಕೂ ಹೆಚ್ಚು ಜನರು ತೀವ್ರವಾಗಿ ಅಸ್ವಸ್ಥಗೊಂಡಿರುವ ಘಟನೆ ಆಂಧ್ರಪ್ರದೇಶದ ಅಂಬೇಡ್ಕರ್ ಕೋನಸಿಮಾ ಜಿಲ್ಲೆಯಲ್ಲಿ ನಡೆದಿದೆ. ಅಸ್ವಸ್ಥಗೊಂಡ 16 ಜನರಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಉಪಹಾರ ಸೇವಿಸಿದ ಬಳಿಕ ವಾಂತಿ ಭೇಧಿ ಕಾಣಿಸಿಕೊಂಡು ಗ್ರಾಹಕರು ತೀವ್ರವಾಗಿ ಅಸ್ವಸ್ಥರಾಗಿದ್ದಾರೆ. ಎರಡು ದಿನಗಳ ಹಿಂದೆ ಜನರು ಈ ಹೋಟೆಲ್ನಲ್ಲಿ ಉಪಹಾರ ಸೇವಿಸಿದ್ದರು. ಅಂಬಾಜಿಪೇಟೆ ಮಂಡಲದ ಮಹಾಚವರಂ ನಲ್ಲಿ ಈ ಒಂದು ಘಟನೆ ನಡೆದಿದೆ.