ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಬಳಿಯ ಬೈಸರನ್ ಕಣಿವೆಯಲ್ಲಿ ರಾಜಸ್ಥಾನದ ಪ್ರವಾಸಿಗರ ಗುಂಪಿನ ಮೇಲೆ ದಾಳಿ ನಡೆಸಲಾಯಿತು. ಕಣಿವೆಯ ಮೇಲ್ಭಾಗದಲ್ಲಿ ಗುಂಡಿನ ದಾಳಿ ನಡೆದಿದ್ದು, ಇವಂದು ಗುಂಡಿನ ದಾಳಿಯಲ್ಲಿ ಇದುವರೆಗೂ 20ಕ್ಕೂ ಹೆಚ್ಚು ಪ್ರವಾಸಿಗರು ಸಾವನ್ನಪ್ಪಿದ್ದು ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಆಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಹೌದು ಉಗ್ರರ ಗುಂಡಿನ ದಾಳಿಯಲ್ಲಿ ಸುಮಾರು 20ಕ್ಕೂ ಹೆಚ್ಚು ಪ್ರವಾಸಿಗರು ಮೃತಪಟ್ಟಿದ್ದಾರೆ ಎನ್ನಲಾಗುತ್ತಿದ್ದು ಕಾಶ್ಮೀರದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಇಂದು ಉಗ್ರರು ಭೀಕರ ಗುಂಡಿನ ದಾಳಿ ನಡೆಸಿದ್ದಾರೆ. ಇದೇ ಸಂದರ್ಭದಲ್ಲಿ ಹನಿಮೂನ್ ಗೆ ಎಂದು ತೆರಳಿದ್ದ ನವ ದಂಪತಿಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಉಗ್ರರ ಗುಂಡಿನ ದಾಳಿಗೆ ಹನುಮೂನ್ ಗೆ ಎಂದು ಬಂದಿದ್ದ ನವವಿವಾಹಿತ ಸಾವನಪ್ಪಿದ್ದಾನೆ. ಎಂದು ತಿಳಿದು ಬಂದಿದೆ. ಮುಸ್ಲಿಂ ಅಲ್ಲ ಎಂದು ಬೀಳುತ್ತಿದ್ದಂತೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಗಂಡನ ಶವದ ಮುಂದೆ ಪತ್ನಿ ಕುಳಿತಿರುವ ಫೋಟೋ ವೈರಲ್ ಆಗಿದೆ.
ಶಿವಮೊಗ್ಗದ ಮಂಜುನಾಥ್ ಬಲಿ
ಇನ್ನು ಈ ಗುಂಡಿನ ದಲಿಯಲ್ಲಿ ಕರ್ನಾಟಕದ ಶಿವಮೊಗ್ಗ ನಗರದ ನಿವಾಸಿ ಮಂಜುನಾಥ್ ಇದೀಗ ಸಾವನಪ್ಪಿದ್ದಾರೆ. ಇನ್ನೊರ್ವ ಕನ್ನಡಿಗ ಅಭಿಜ್ಞಾ ರಾವ್ ಗೆ ಗಂಭೀರವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಮಂಜುನಾಥ ಪತ್ನಿ ಪಲ್ಲವಿ ಮತ್ತು ಮಗ ಸುರಕ್ಷಿತವಾಗಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿ ಮೃತ ಮಂಜುನಾಥ್ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದರು ಎಂದು ತಿಳಿದುಬಂದಿದೆ.
ಉಗ್ರರ ದಾಳಿಯ ಭಯಾನಕತೆಯನ್ನು ಮೃತ ಮಂಜುನಾಥ್ ಪತ್ನಿ ಪಲ್ಲವಿ ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದು, ನನ್ನ ಕೆಣ್ಣೆದುರಿಗೆ ನನ್ನ ಪತಿ ಮೃತಪಟ್ಟಿದ್ದಾರೆ. ನನಗೊಂದು ಫ್ಲೈಟ್ ಅರೇಂಜ್ ಮಾಡಿ ಕೊಡಿ ಎಂದು ಮೃತ ಮಂಜುನಾಥ್ ಪತ್ನಿ ಪಲ್ಲವಿ ಕಣ್ಣೀರಿಟ್ಟಿದ್ದಾರೆ. ಮಾಧ್ಯಮಗಳ ಮೂಲಕ ರಾಜ್ಯ ಸರ್ಕಾರಕ್ಕೆ ಪಲ್ಲವಿ ಮನವಿ ಮಾಡಿಕೊಂಡಿದ್ದಾರೆ.
ನನ್ನ ಗಂಡನನ್ನು ಸಾಯಿಸಿ ನನ್ನ ಮಗನನ್ನು ಬೈದು ಹಲ್ಲೆ ಮಾಡಿದ್ದಾರೆ. ನನ್ನ ಹಾಗು ನನ್ನ ಮಗನನ್ನು ಕೊಂದುಬಿಡು ಎಂದು ಹೇಳಿದ್ವಿ. ನಿನ್ನ ಕೊಲ್ಲಲ್ಲ ಹೋಗಿ ಮೋದಿಗೆ ಹೇಳು ಎಂದು ಉಗ್ರರು ಹೇಳಿದರು. ನನ್ನ ಪತಿ ಕೊಂದು ಉಗ್ರರು ಅಲ್ಲೇ ಓಡಾಡುತ್ತಿದ್ದರು. ಎಂದು ಮೃತ ಮಂಜುನಾಥ್ ಪತ್ನಿ ಪಲ್ಲವಿ ಮಾಧ್ಯಮಗಳಿಗೆ ಹೇಳಿಕೆ ನೀಡಿದರು.