ಕೋಲಾರ : ಕೋಲಾರದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ವಸತಿ ನಿಲಯದಲ್ಲಿದ್ದ ವಿದ್ಯಾರ್ಥಿಗಳು ರಾತ್ರಿ ಈರುಳ್ಳಿ ದೋಸೆ ಸೇವಿಸಿ ಸುಮಾರು 35ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಇದೀಗ ವರದಿಯಾಗಿದೆ.
ಹೌದು ಈರುಳ್ಳಿ ದೋಸೆ ಸೇವಿಸಿದ್ದ 35 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಕೋಲಾರ ತಾಲೂಕಿನ ಬಸವನತ್ತ ಗ್ರಾಮದ ಬಳಿ ಒಂದು ಘಟನೆ ನಡೆದಿದೆ. ಕಾಲೇಜಿನ ವಸತಿ ನೀಡಿದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ ರಾತ್ರಿ ಹಾಸ್ಟೆಲ್ ನಲ್ಲಿ ಈರುಳ್ಳಿ ದೋಸೆ ಸೇವಿಸಿದ್ದರು. ವಾಂತಿಭೇದಿಯಾಗಿ 35ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.