ಮೈಸೂರು : ಹೊಸ ವರ್ಷ ಆಚರಣೆಯ ಸಂದರ್ಭದಲ್ಲಿ ಶಾಲೆಯಲ್ಲಿ ಈ ಒಂದು ಹೊಸ ವರ್ಷಾಚರಣೆ ಆಚರಿಸುವ ವೇಳೆ ಕೇಕ್ ತಿಂದು ಸುಮಾರು 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಬೋಳನಹಳ್ಳಿಯ ಶ್ರೀ ಮಂಜುನಾಥ ಅನುದಾನಿತ ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿಭಾಗದಲ್ಲಿ ನಡೆದಿದೆ.
ಹೌದು ಹೊಸವರ್ಷದ ಅಂಗವಾಗಿ ಕೇಕ್ ಕಟ್ ಮಾಡಿ ಮಕ್ಕಳಿಗೆ ವಿತರಿಸಿದ್ದಾರೆ. ಕೇಕ್ ತಿಂದಿದ್ದರಿಂದಾಗಿ ನಿನ್ನೆ ಮಕ್ಕಳಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ತಕ್ಷಣವೇ ಮಕ್ಕಳನ್ನು ಬೋಳನಹಳ್ಳಿ ಗ್ರಾಮದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಒಮೆಲೆ ಬಂದ ಮಕ್ಕಳನ್ನು ಪರೀಕ್ಷಿಸಿದ ವೈದ್ಯೆ ದಾಕ್ಷಾಯಣಿ ಹಾಗೂ ಸಿಬ್ಬಂದಿ ಅಸ್ವಸ್ಥಗೊಂಡ ಮಕ್ಕಳನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಿದ್ದಾರೆ.
ಭೇದಿ ಕಾಣಿಸಿಕೊಂಡಿದ್ದ 36 ಮಕ್ಕಳ ಪೈಕಿ 6 ಮಕ್ಕಳು ತಕ್ಷಣವೇ ಚೇತರಿಸಿಕೊಂಡಿದ್ದರಿಂದ ಮನೆಗೆ ಕಳುಹಿಸಲಾಗಿದೆ. ಉಳಿದ ಮಕ್ಕಳನ್ನು ದಾಖಲಿಸಿಕೊಂಡು ಸಂಜೆವರೆಗೆ ಚಿಕಿತ್ಸೆ ನೀಡಿದ ನಂತರ ಚೇತರಿಸಿಕೊಂಡವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.ಕೇಕ್ನ ಸ್ಯಾಂಪಲ್ ಪಡೆದಿದ್ದು, ಲ್ಯಾಬ್ಗೆ ಕಳುಹಿಸಲಾಗುವುದು. ವರದಿ ಬಂದ ನಂತರ ನಿಖರ ಕಾರಣ ತಿಳಿಯಲಿದೆ ಎಂದು ವೈದ್ಯರು ತಿಳಿಸಿದ್ದಾರೆ.