ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡ ಘಟನೆ ನಡೆದಿದೆ.
ತಡರಾತ್ರಿ ಹುಬ್ಬಳ್ಳಿಯ ಸಾಯಿ ನಗರದ ಈಶ್ವರ ದೇವಾಲಯದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಅಯ್ಯಪ್ಪ ಮಾಲಾಧಿಕಾರಿಗಳು ಗಾಯಗೊಂಡಿರುವ ಘಟನೆ ನಡೆದಿದೆ. ಈಶ್ವರ ದೇವಸ್ಥಾನದಲ್ಲಿ ರಾತ್ರಿ ಮಲಗಿದ್ದಾಗ ಸಿಲಿಂಡರ್ ಸ್ಪೋಟಗೊಂಡಿದೆ. ಘಟನೆಯಲ್ಲಿ ಐದಕ್ಕೂ ಹೆಚ್ಚು ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದಾರೆ.
ಗ್ಯಾಸ್ ಸೋರಿಕೆಯಾಗಿ ದೀಪದ ಬೆಂಕಿ ತಗುಲಿ ಸಿಲಿಂಡರ್ ಸ್ಪೋಟಗೊಂಡಿರುವ ಶಂಕೆ ವ್ಯಕ್ತವಾಗಿದ್ದು,. ಗಾಯಾಳು ಅಯ್ಯಪ್ಪ ಭಕ್ತರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹುಬ್ಬಳ್ಳಿ -ಧಾರವಾಡ ಡಿಸಿಪಿ ನಂದಗಾವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.