ಯಾದಗಿರಿ : ಖಾಸಗಿ ಏಜೆನ್ಸಿ ಸರಬರಾಜು ಮಾಡಿದ್ದ ಆಹಾರವನ್ನು ಸೇವಿಸಿದ ಶಾಲೆಯ ಸುಮಾರು 50ಕ್ಕೂ ಹೆಚ್ಚು ಮಕ್ಕಳು ವಾಂತಿ, ಬೇದಿಯಿಂದ ಅಸ್ವಸ್ಥರಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ದೋರನಹಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ.
ಹೌದು ಶಾಲೆಯಲ್ಲಿ ಬಿಸಿ ಊಟ ಸೇವಿಸಿದ್ದ 50 ಕ್ಕೂ ಹೆಚ್ಚು ಮಕ್ಕಳು ಇದೀಗ ಅಸ್ವಸ್ಥರಾಗಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿಯ ಸರ್ಕಾರಿ ಪ್ರೌಢಶಾಲೆ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ. ಮಹಾಂತೇಶ್ವರ ಪ್ರಾಥಮಿಕ ಶಾಲೆ ಹಾಗೂ ಅಂಬೇಡ್ಕರ್ ಶಾಲೆಯಲ್ಲಿ ಈ ಒಂದು ದುರಂತ ಸಂಭವಿಸಿದೆ.
ಖಾಸಗಿ ಏಜೆನ್ಸಿ ಸರಬರಾಜು ಮಾಡಿದ್ದ ಆಹಾರವನ್ನು ಮಕ್ಕಳು ಸೇವಿಸಿದ್ದರು ಎನ್ನಲಾಗಿದೆ. ನಾಲ್ಕು ಶಾಲೆಗಳ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿಭೇದಿ ಅಸ್ವಸ್ಥಗೊಂಡ ಮಕ್ಕಳಿಗೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಘಟನೆಕ್ಕೆ ಆರೋಗ್ಯ ಅಧಿಕಾರಿಗಳು ಸೇರಿದಂತೆ ಪೊಲೀಸರು ಭೇಟಿ ನೀಡಿದ್ದು ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.