ಹಾಸನ: ಜಾತ್ರಾ ಮಹೋತ್ಸವದಲ್ಲಿ ಪ್ರಸಾದ ಸೇವಿಸಿ 50ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಮಾಲೆಕಲ್ ತಿರುಪತಿ ಗ್ರಾಮದಲ್ಲಿ ನಡೆದಿದೆ.
ಮಾಲೇಕಲ್ ತಿರುಪತಿ ಜಾತ್ರೆಯ ಅಂಗವಾಗಿ ಪ್ರಸಾದ ಸಿದ್ಧಪಡಿಸಲಾಗಿತ್ತು. ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ್ದ ಭಕ್ತರು ಪ್ರಸಾದ ಸೇವಿಸಿದ್ದು, 50ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಘಟನೆ ಬಗ್ಗೆ ಮಾಹಿತಿ ತಿಳಿದ ಅಧಿಕಾರಿಗಳು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.