ಬೆಂಗಳೂರು : ಯಕ್ಷಗಾನ ಕಲಾವಿದರ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮೈಸೂರಿನ ಮಾನಸಗಂಗೋತ್ರಿ ಪ್ರಸಾರಾಂಗದಲ್ಲಿ ನಡೆದ ಧರೆಗೆ ದೊಡ್ಡವರ ಕಾವ್ಯದ ಏಳು ಪಠ್ಯಗಳು ಹಾಗೂ ನಾವು ಕೂಗುವ ಕೂಗು ಕೃತಿಗಳನ್ನು ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದು, ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳಾಗಿದ್ದು, ಅಲ್ಲಿ ಅಂಥ ಅನಿವಾರ್ಯತೆ ಇದೆ ಎಂದು ಹೇಳಿರುವ ಆಡಿಯೋ ವೈರಲ್ ಆಗಿದೆ.
ಸತ್ಯವನ್ನು ಹೇಳಲು ಹಿಂಜರಿಯಬಾರದು. ಯಕ್ಷಗಾನ ಕಲಾವಿದರು ಮೇಳಕ್ಕೆಂದು 6-8 ತಿಂಗಳು ತಿರುಗಾಟದಲ್ಲೇ ಇರುವುದರಿಂದ ಅವರಿಗೆ ಯಾರೂ ಹೆಣ್ಣು ಕೊಡುತ್ತಿರಲಿಲ್ಲ. ಅಲ್ಲಿನ ಸ್ತ್ರೀ ವೇಷಧಾರಿಗಳೂ ಒತ್ತಡದಲ್ಲಿರುತ್ತಿದ್ದರು. ಅವರ ಮೇಲೆ ಇತರರಿಗೆ ಮೋಹವೇ ಇರುತ್ತಿತ್ತು. ಸ್ತ್ರೀವೇಷದ ಕಲಾವಿದ ಏನಾದರೂ ಸಲಿಂಗಕಾಮ ನಿರಾಕರಿಸಿದ್ದರೆ, ಭಾಗವತರು ಮರು ದಿವಸ ಅವರಿಗೆ ಪದ್ಯವನ್ನೇ ಕೊಡುತ್ತಿರಲಿಲ್ಲ. ಆ ಮೂಲಕ ರಂಗಭೂಮಿ ಮೇಲೆ ಅವನ ವಿರುದ್ಧ ಸೇಡು ತೀರಿಸಿಕೊಳ್ಳಲಾಗ್ತಿತ್ತು ಎಂದು ಪುರುಷೋತ್ತಮ ಬಿಳಿಮಲೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.








