ಬೆಂಗಳೂರು : ಲಕ್ಷ್ಮಿಸಾಗರದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ತಾಯಿ ಮಗಳು ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಲಕ್ಷ್ಮಿ ಸಾಗರ ಗ್ರಾಮದಲ್ಲಿ ನಡೆದಿದೆ. ಶನಿವಾರ ನಡೆದಿರುವ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ.
ತಾಯಿ ಲಾವಣ್ಯ (28) ಹಾಗೂ ಪುತ್ರಿ ಲಕ್ಷತಾ (8) ಮೃತ ದುರ್ದವಿಗಳು ಎಂದು ತಿಳಿದುಬಂದಿದೆ. ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಪತಿ ಸಂಪತ್ ವಿರುದ್ಧ ದೂರು ದಾಖಲಾಗಿದೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ಮೃತ ಲಾವಣ್ಯ ಪೋಷಕರು ಇದೀಗ ಆಗ್ರಹಿಸಿದ್ದಾರೆ. ಘಟನೆ ಕುರಿತಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.








