ತುಮಕೂರು : ತುಮಕೂರಿನಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಮಾನಸಿಕ ಖಿನ್ನತೆಗೆ ಒಳಗಾಗಿದ್ದಂತಹ ತಾಯಿ ಹಾಗೂ ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಅದಲಗೆರೆ ಗ್ರಾಮದಲ್ಲಿ ನಡೆದಿದೆ.
ತಾಯಿ ಹಾಗೂ ಮಗಳು ಕೆರೆಗೆ ಹರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಂತ ತಾಯಿ, ಮಗಳನ್ನು ವಿರುಪಾಕ್ಷಿಪುರದ ಪ್ರೇಮಕುಮಾರಿ (50) ಮತ್ತು ಪೂರ್ಣಿಮಾ (30) ಎಂದು ತಿಳಿದು ಬಂದಿದೆ. ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೀಗ ವ್ಯಕ್ತವಾಗುತ್ತಿದ್ದು, ಘಟನೆ ಕುರಿತಂತೆ ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.