ಮೈಸೂರು : ಮೈಸೂರು : ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದರು. ಇದೀಗ ವಿಚಾರಣೆ ಅಂತ್ಯವಾಗಿದೆ.
ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರನ್ನು ಸಾಮಾನ್ಯರಂತೆ ಲೋಕಾಯುಕ್ತ ಎಸ್ ಪಿ ಉದೇಶ್ ಅವರು ವಿಚಾರಣೆ ನಡೆಸಿದ್ದು, ಲೋಕಾಯುಕ್ತ ವಿಚಾರಣೆ ಬಳಿಕ ಸಿಎಂ ಸಿದ್ದರಾಂಯ್ಯಗೆ ಮತ್ತೊಂದು ನೋಟಿಸ್ ನೀಡಲಾಗಿದ್ದು, ವಿಚಾರಣೆಗೆ ಕರೆದಾಗ ಮತ್ತೆ ಬರಬೇಕು ಎಂದು ಎಸ್ ಪಿ ಉದೇಶ್ ಅವರು ಸಿಎಂ ಸಿದ್ದರಾಮಯ್ಯಗೆ ನೋಟಿಸ್ ನೀಡಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದು, ನವೆಂಬರ್ 6ರಂದು ಬೆಳಿಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಈಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದರು.ಇಂದು ವಿಚಾರಣೆ ಅಂತ್ಯವಾಗಿದೆ.ಮೈಸೂರು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗಿರುವ ಸಿಎಂ ಸಿದ್ದರಾಮಯ್ಯ. ಈ ಮೂಲಕ 40 ವರ್ಷಗಳ ಸಿದ್ದರಾಮಯ್ಯ ಅವರ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.