ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತ ಸಲ್ಲಿಸಿದ ಬಿ ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ತಕರಾರು ಅರ್ಜಿ ಸಲ್ಲಿಸಿದ್ದರು. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ತಕರಾರು ಅರ್ಜಿ ವಿಚಾರಣೆ ಅಂತ್ಯವಾಗಿದ್ದು ಏಪ್ರಿಲ್ 3ಕ್ಕೆ ಆದೇಶ ಕಾಯ್ದಿರಿಸಿ ಕೋರ್ಟ್ ಅದೇಶಿಸಿದೆ.
ಹೌದು ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ತಕರಾರು ಅರ್ಜಿಯ ವಿಚಾರಣೆ ಅಂತ್ಯವಾಗಿದೆ. ಏಪ್ರಿಲ್ 3ಕ್ಕೆ ತಕರಾರು ಅರ್ಜಿಯ ಆದೇಶವನ್ನು ಕಾಯ್ದಿರಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಏಪ್ರಿಲ್ 3 ರಂದೇ ತೀರ್ಪು ಪ್ರಕಟಿಸಲಿದೆ.