ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತೊಂದು ಬೆಳವಣಿಗೆ ಆಗಿದ್ದು, ಮುಡಾದ ಈ ಹಿಂದಿನ ಆಯುಕ್ತರಾಗಿದ್ದ ಡಿಬಿ ನಟೇಶ್ ಅವರು ಇಡಿ ತನಿಖೆಗೆ ತಡೆಯಾಜ್ಞೆ ಕೋರಿ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಹೌದು ಪ್ರಕರಣದಲ್ಲಿ ಇಡಿ ತನಿಖೆ ತಡೆಯಾಜ್ಞೆ ಕುರಿ ಅರ್ಜಿ ಮೋಡಾದ ಮಾಜಿ ಆಯುಕ್ತ ಡಿಬಿ ನಟೇಶ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇಡಿ ಯಿಂದ ಲೋಕಾಯುಕ್ತ ಪೊಲೀಸರಿಗೆ ಪತ್ರದ ಬೆನ್ನಲ್ಲೆ ಅವರು ಅರ್ಜಿ ಸಲ್ಲಿಸಿದ್ದಾರೆ. ಅಕ್ಟೋಬರ್ 28 ಮತ್ತು 29 ರಂದು ಈಡಿ ತಮ್ಮ ಹೇಳಿಕೆ ಪಡೆದಿರುವುದು ಕಾನೂನುಬಾಹಿರ.
ಹಾಗಾಗಿ ಪಿಎಮ್ಎಲ್ಎ ಕಾಯ್ದೆಯ ಅಡಿ ಶೋಧನೆಯನ್ನು ರದ್ದು ಪಡಿಸಲು ಅವರು ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ. ಜಾರಿ ನಿರ್ದೇಶನಲಯ ನೀಡಿದ್ದ ಪಡಿಸಲು ನಟೇಶ್ ಅವರು ಹೈಕೋರ್ಟ್ ಗೆ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.