ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ತನಿಖೆಯಲ್ಲಿ ಸಾಕ್ಷಾಧಾರಗಳ ಕೊರತೆ ಇದೆ ಎಂದು ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಲೋಕಾಯುಕ್ತ ಪೊಲೀಸ್ ಟಿ.ಉದೇಶ ಅವರು ಡಾಕುಮೆಂಟ್ಸ್ ಸೇರಿದಂತೆ ಒಟ್ಟು 11 ಸಾವಿರ ಪುಟಗಳ ತನಿಖೆಯ ಅಂತಿಮ ವರದಿಯನ್ನು ಸಲ್ಲಿಸಿದರು.
ಪ್ರಕರಣದಲ್ಲಿ ನಿನ್ನೆ ಮಹತ್ವದ ಬೆಳವಣಿಗೆ ನಡೆದಿದ್ದು, ತನಿಖಾ ವರದಿಯಲ್ಲಿ ಲೋಕಾಯುಕ್ತ ಪೊಲೀಸರು ಈ ಒಂದು ಹಗರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ಉಲ್ಲೆಖಿಸಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಹಾಗೂ ದೇವರಾಜುಗೆ ಲೋಕಾಯುಕ್ತ ಪೊಲೀಸರು ಕ್ಲೀನ್ ಚಿಟ್ ನೀಡಿದ್ದಾರೆ. ಇದೆ ಸಂದರ್ಭದಲ್ಲಿ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೂ ಕೂಡ ನಿಮಗೆ ಆಕ್ಷೇಪಣೆಗಳು ಇದ್ದಲ್ಲಿ ಕೋರ್ಟಿಗೆ ಸಲ್ಲಿಸಿ ಎಂದು ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ. ಇದೀಗಜನಪ್ರತಿನಿಧಿಗಳ ಕೋರ್ಟ್ ನ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರಿಗೆ ಅಂತಿಮ ವರದಿ ಸಲ್ಲಿಸಲಾಯಿತು. ಸುಮಾರು 11 ಸಾವಿರ ಪುಟಗಳ ತನಿಖಾ ವರದಿಯನ್ನು ಲೋಕಾಯುಕ್ತ ಎಸ್ಪಿ ಉದೇಶ ಸಲ್ಲಿಸಿದರು.
ಲೋಕಾಯುಕ್ತ ಸಲ್ಲಿಸಿದ ವರದಿಯಲ್ಲೇನಿದೆ?
ಸಿಎಂ ಸಿದ್ದರಾಮಯ್ಯ ಮೇಲೆ ಮಾಡಿದಂತಹ ಆರೋಪಗಳು ಸುಳ್ಳು. ಸೈಟ್ ಹಂಚಿಕೆಯಲ್ಲಿ ಸಿದ್ದರಾಮಯ್ಯ ಮುಡಾ ಮೇಲೆ ಪ್ರಭಾವ ಬೀರಿಲ್ಲ. ಕುಟುಂಬಸ್ಥರಿಗೆ ಪರಿಹಾರವಾಗಿ ಸಿಗಬೇಕಿದ್ದ ಪರಿಹಾರ ಸಿಕ್ಕಿಲ್ಲ. ಪಾರ್ವತಿ ಪಡೆದಿದ್ದ 14 ಸೈಟ್ ಗಳನ್ನು ಕೂಡ ವಾಪಸ್ ಕೊಟ್ಟಿದ್ದಾರೆ. ಜಮೀನು ವರ್ಗಾವಣೆ ಕಾನೂನಾತ್ಮಕವಾಗಿ ನಡೆದಿದೆ.
ದೇವರಾಜುಗೆ ಸಂಬಂಧಿಸಿದಂತೆ ಡಿ ನೋಟಿಫೈ ಪ್ರಕ್ರಿಯೆಯಲ್ಲಿ ಕೆಲ ತಪ್ಪುಗಳಾಗಿವೆ. ದೇವರಾಜು ಜೀವನಕ್ಕೆ ಒಂದೇ ಜಮೀನು ಇರೋದು ಎಂದು ಹೇಳಿಕೊಂಡಿದ್ದರು. ಹೀಗಾಗಿ ಡಿನೋಟಿಫೈ ಮಾಡಬೇಕೆಂದು ದೇವರಾಜು ಕೇಳಿಕೊಂಡಿದ್ರಂತೆ. ದೇವರಾಜು ಈ ಮಾಹಿತಿಯನ್ನು ಮರೆಮಾಚಿರುವುದು ಕಂಡು ಬಂದಿದೆ. ಹೀಗಾಗಿ ಪ್ರಕರಣದಲ್ಲಿ ಬೇರೆ ಯಾರದ್ದು ಪಾತ್ರ ಇಲ್ಲ ಎನ್ನುವ ತನಿಖಾ ವರದಿಯಲ್ಲಿ ಲೋಕಾಯುಕ್ತ ಪೊಲೀಸರು ಉಲ್ಲೇಖಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಹಾಗೂ ಮೂಲ ಜಮೀನು ಮಾಲೀಕರಾದ ದೇವರಾಜ್ ಗೆ ಲೋಕಾಯುಕ್ತ ಕ್ಲೀನ್ ನೀಡಿದೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರಿಂದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಲಾಗಿದೆ. ಸಾಕ್ಷಾಧಾರಗಳ ಕೊರತೆಯಿಂದ ಇದೀಗ ಲೋಕಾಯುಕ್ತ ಪೊಲೀಸರು ಅಂತಿಮ ತನಿಖಾ ವರದಿಯನ್ನು ಸಲ್ಲಿಸಿದ್ದಾರೆ. ಡಾಕುಮೆಂಟ್ ಸೇರಿದಂತೆ 11,000 ಪುಟಗಳ ಅಂತಿಮ ತನಿಕ ವರದಿಯನ್ನು ಸಲ್ಲಿಸಿದ್ದಾರೆ.