ಬೆಂಗಳೂರು : ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಮಾರ್ಚ್ 7 ರಂದು ವಿಚಾರಣೆ ಮುಂದೂಡಿತು.
ಈ ವೇಳೆ ಅಂತಿಮ ವರದಿ ಕಾಪಿ ನೀಡಲು ದೂರುದಾರ ಸ್ನೇಹಮಯಿ ಕೃಷ್ಣ ಈ ವೇಳೆ ನ್ಯಾಯಾಲಯಕ್ಕೆ ಮನವಿ ಮಾಡಿದರು. ತಕರಾರು ಇದ್ದರೆ ಆಕ್ಷೇಪಣೆ ಸಲ್ಲಿಸುವಂತೆ ಇದೆ ವೇಳೆ ಕೋರ್ಟ್ ಸ್ನೇಹಮಯಿ ಕೃಷ್ಣಗೆ ಕೋರ್ಟ್ ಸೂಚಿಸಿತು. ನಮಗೆ ಲೋಕಾಯುಕ್ತ ತನಿಖೆಯ ಅಂತಿಮ ವರದಿಯ ಕಾಪಿ ನೀಡಿ ನಂತರ ತಕರಾರು ಅರ್ಜಿ ಸಲ್ಲಿಸುವುದಾಗಿ ಸ್ನೇಹಮಯಿ ಕೃಷ್ಣ ತಿಳಿಸಿದರು.
ಈ ವೇಳೆ ಅಂತಿಮ ವರದಿ ನೀಡಲು ಲೋಕಾಯುಕ್ತ ಅಧಿಕಾರಿಗಳಿಗೆ ಜನಪ್ರತಿನಿಧಿಗಳ ಕೋರ್ಟ್ ಸೂಚನೆ ನೀಡಿ, ಮಾರ್ಚ್ 7 ರಂದು ವಿಚಾರಣೆ ಮುಂದೂಡಿ ನ್ಯಾಯಾಲಯ ಆದೇಶ ನೀಡಿತು. ಹಾಗಾಗಿ ಲೋಕಾಯುಕ್ತ ಅಧಿಕಾರಿಗಳು ಇಂದು ಸ್ನೇಹಮಯಿ ಕೃಷ್ಣಗೆ ಅಂತಿಮ ವರದಿಯ ಕಾಪಿ ನೀಡಲಿದ್ದಾರೆ.