ಬೆಂಗಳೂರು : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮುಡಾ ಹಗರಣ ಸಂಬಂಧ ಖಾಸಗಿ ದೂರು ದಾಖಲಾಗಿದೆ.
ಬೆಂಗಳೂರಿನ ವಿಶೇಷ ಕೋರ್ಟ್ ನಲ್ಲಿ ಸ್ನೇಹಮಯಿ ಕೃಷ್ಣ ಎಂಬುವರು ಸಿಎಂ ಸಿದ್ದರಾಮಯ್ಯರನ್ನು ಆರೋಪಿಯನ್ನಾಗಿಸಿ ಖಾಸಗಿ ದೂರು ದಾಖಲಿಸಿದ್ದಾರೆ.
ಮುಡಾ ಹಗರಣ ಸಂಬಂಧ ಸ್ನೇಹಮಯಿ ಕೃಷ್ಣ ದಾಖಲಿಸಿರುವ ಖಾಸಗಿ ದೂರು ಸಂಬಂಧ ಕೋರ್ಟ್ ನಲ್ಲಿ ನಾಳೆ ವಿಚಾರಣೆಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಕೇಸ್ ವಿಚಾರಣೆ ಸ್ವೀಕರಿಸುವ ಸಾಧ್ಯತೆ ಇದೆ. ಇನ್ನು ಪ್ರಾಸಿಕೋಷನ್ ಗೆ ಅನುಮತಿ ಪಡೆಯದೇ ಖಾಸಗಿ ದೂರು ಸಲ್ಲಿಸಲಾಗಿದೆ.