ಮೈಸೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ನಾಗರಾಭಿವೃದ್ಧಿ ಪ್ರಧಿಕಾರ (ಮುಡಾ) ಹಗರಣವು ರಾಜ್ಯಾದ್ಯಂತ ಭಾರಿ ಸದ್ದು ಮಾಡಿತ್ತು. ಇದೀಗ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹೆಸರು ರದ್ದು ಮಾಡಿ ಅದಕ್ಕೆ ಮರು ನಾಮಕರಣ ಮಾಡಲಾಗಿದೆ. ಈ ಕುರಿತು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಹೌದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹೆಸರು ರದ್ದು ಮಾಡಲಾಗಿದ್ದು, ಮುಡಾ ಹೆಸರು ತೆಗೆದು ‘ಎಂಡಿಎ’ ಎಂದು ಇದೀಗ ಮರುನಾಮಕರಣ ಮಾಡಲಾಗಿದೆ. ಇಂದಿನಿಂದಲೇ ಎಂಡಿಎ ಮೈಸೂರು ಅಭಿವೃದ್ಧಿ ಪ್ರಾಧಿಕಾರ ಎಂದು ಹೆಸರು ಜಾರಿಯಾಗಿದೆ. ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಲತಾ ಅವರಿಂದ ಈ ಕುರಿತು ಆದೇಶ ಹೊರಡಿಸಲಾಗಿದೆ.