ಬೆಂಗಳೂರು : ಮುಡಾ ಸೈಟ್ ಹಂಚಿಕೆಯಲ್ಲಿ ಹಗರಣ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧ ಚುನಾವಣೆ ಆಯೋಗಕ್ಕೆ ಎರಡನೇ ದೂರು ಸಲ್ಲಿಕೆಯಾಗಿದೆ ಎಂದು ತಿಳಿದುಬಂದಿದೆ.
ಹೌದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎರಡು ಪ್ರತ್ಯೇಕ ದೂರು ಸಲ್ಲಿಕೆಯಾಗಿದ್ದು, 2018-23ರ ಚುನಾವಣಾ ಅಫೀಡಿವೇಟ್ ನಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಎನ್ನುವವರು ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.
2018ರ ವಿಧಾನಸಭೆ ಚುನಾವಣೆಯ ವೇಳೆ 3.16 ಎಕರೆ ಕೃಷಿ ಜಮೀನು ಹೊಂದಿದ್ದು, ಪತ್ನಿ ಪಾರ್ವತಿ ಬಳಿ 3 ಕೆರೆ 16 ಗುಂಟೆ ಜಮೀನು ಎಂದು ನಮೂದಿಸಲಾಗಿದೆ. ಆಫೀಡಿವೇಟ್ ಒಟ್ನಲ್ಲಿ 3 ಎಕರೆ 16 ಗುಂಟೆ ಕೃಷಿ ಜಮಿನು ಎಂದು ನಮೂದು ಮಾಡಲಾಗಿದೆ.ಇದರ ಮೌಲ್ಯ 25 ಲಕ್ಷ ಎಂದು ಸಿಎಂ ಸಿದ್ದರಾಮಯ್ಯ ಆಫೀಡಿವೇಟ್ ನಲ್ಲಿ ನಮೂದಿಸಿದ್ದರು. 2005ರಲ್ಲಿ ಜಮೀನು ಪರಿವರ್ತನೆ ಮಾಡಿಸಿದ್ದ ದಾಖಲೆ ನೀಡಿ ದೂರು ಸಲ್ಲಿಕೆಯಾಗಿದೆ.
2023ರ ವಿಧಾನಸಭೆ ಚುನಾವಣೆಯ ವೇಳೆ 14 ಮುಡಾ ಸೈಟ್ಗಳ ಮೌಲ್ಯ ಕೇವಲ 8 ಕೋಟಿ ಎಂದು ಅಫಿಡಿಟ್ ನಲ್ಲಿ ನಮೂದು ಮಾಡಲಾಗಿದೆ. ಮುಡಾದ 14 ಸೈಟ್ಗಳ ಅಸಲಿ ಮಾರುಕಟ್ಟೆಯ ಮೌಲ್ಯ 34 ಕೋಟಿ ಆಗಿದೆ. ಉದ್ದೇಶಪೂರ್ವಕವಾಗಿ ಸಿಎಂ ಸಿದ್ದರಾಮಯ್ಯ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಎರಡನೇ ದೂರು ಸಲ್ಲಿಕೆಯಾಗಿದೆ. ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಸಾಮಾಜಿಕ ಹೋರಾಟಗಾರ ಟಿಜೆ ಅಬ್ರಹಾಂ ದೂರು ಸಲ್ಲಿಸಿದ್ದಾರೆ.
.