ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟಗಳ ಸರಮಾಲೆಗಳೇ ಸುತ್ತಿಕೊಂಡಿದ್ದು, ಇದೀಗ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೊಟ್ ಅವರಿಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎನ್ನುವವರು ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು ದಾಖಲಿಸಿದ್ದಾರೆ.
ಹೌದು ಸ್ನೇಹ ಮಯಿ ಕೃಷ್ಣ ಎನ್ನುವವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಮೈಸೂರಿನ ಸಾಮಾಜಿಕ ಕಾರ್ಯಕರ್ತರದ ಸ್ನೇಹಮಯಿ ಕೃಷ್ಣ ಅವರು ರಾಜ್ಯಪಾಲರ ಹೆಸರಲ್ಲಿ ಸಿಎಂ ಸಿದ್ದರಾಮಯ್ಯ ಅಕ್ರಮ ಪರಿತ್ಯಾಜನ ಪತ್ರ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಗವರ್ನರ್ ಗೆ ದೂರು ಸಲ್ಲಿಸಿದ್ದಾರೆ.
ಇನ್ನು ನಿನ್ನೆ ಟಿಜೆ ಅಬ್ರಹಾಂ ಅವರು ಕೂಡ ಸಿಎಂ ಸಿದ್ದರಾಮಯ್ಯ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದರು. ಕೆಲವೇ ಕ್ಷಣಗಳಲ್ಲಿ ಈ ಒಂದು ಅರ್ಜಿಯ ವಿಚಾರಣೆ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯ ಏನಾಗುತ್ತದೆ ಎಂಬುವುದು ತೀವ್ರ ಕುತೂಹಲ ಕೆರಳಿಸಿದೆ.