ಬೆಂಗಳೂರು : ವಾಲ್ಮೀಕಿ ನಿಗಮದ ಹಗರಣದ ತನಿಖೆ ನಡೆಸಿರುವ ಇಡಿ ಅಧಿಕಾರಿಗಳು ಇಂದು ಚಾರ್ಜ್ ಶೀಟ್ ಸಲ್ಲಿಸಲಾಗಿದ್ದು, ಪ್ರಕಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಅವರೇ ಮಾಸ್ಟರ್ ಮೈಂಡ್ ಎಂದು ಉಲ್ಲೇಖಿಸಲಾಗಿದೆ.
ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದು, ಇದರಲ್ಲಿ ಪ್ರಕರಣದ ಮಾಸ್ಟರ್ ಮೈಂಡ್ ಬಿ.ನಾಗೇಂದ್ರ ಎಂದು ಉಲ್ಲೆಖಿಸಲಾಗಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅವ್ಯವಹಾರ ಪ್ರಕರಣದಲ್ಲಿ ಇಡಿ ಅಧಿಕಾರಿಗಳಿಂದ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಬಂಧಿಸಲಾಗಿತ್ತು. ಆ ಬಳಿಕ ಅವರನ್ನು ಕೋರ್ಟ್ ಗೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.