ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನಾಳೆ ಮಹತ್ವದ ಸಚಿವ ಸಂಪುಟ ಸಭೆ ಕರೆದಿದ್ದಾರೆ.
ನಾಳೆ ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ರಾಜ್ಯಪಾಲರ ನಡೆ ಬಗ್ಗೆ ಸಂಪುಟದಲ್ಲಿ ಮಹತ್ವದ ಚರ್ಚೆ ನಡೆಯಲಿದೆ. ರಾಜ್ಯಪಾಲರ ನೋಟಿಸ್ ಗೆ ಹೇಗೆ ಉತ್ತರ ಕೊಡಬೇಕೆಂದು ಸಭೆಯಲ್ಲಿ ಚರ್ಚಿಸುವ ಸಾಧ್ಯತೆಯಿದೆ ಎನ್ನಲಾಗಿದೆ.