ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ರಾಜ್ಯಾದ್ಯಂತ ಸಿಎಂ ಸಿದ್ದರಾಮಯ್ಯ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಸಾಧ್ಯತೆ ಇದ್ದು, ಕಟ್ಟೆಚ್ಚರ ವಹಿಸಲಾಗಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ಜೊತೆಗೆ ಸಿಎಂ ಸಿದ್ದರಾಮಯ್ಯ ಮುಂದಿನ ಕಾನೂನು ಕ್ರಮಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.
ಈ ನಡುವೆ ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಂಡ ಬೆನ್ನಲ್ಲೇ ರಾಜ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಿಎಂ ಸಿದ್ದರಾಮಯ್ಯ ಅಭಿಮಾನಿಗಳು ಪ್ರತಿಭಟನೆ ನಡೆಸುವ ಸಾಧ್ಯತೆ ಇದ್ದು, ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.