ಬಳ್ಳಾರಿ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರ ಮಧ್ಯ ಇಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಎನ್ನುವವರು ಲೋಕಾಯುಕ್ತ ಪೊಲೀಸರ ವಿರುದ್ಧವೇ ಗವರ್ನರ್ ಗೆ ಮತ್ತೊಂದು ದೂರು ನೀಡಿದ್ದಾರೆ. ಇದೀಗ ಶಾಸಕ ಜನಾರ್ಧನ ರೆಡ್ಡಿ ಅವರು ಮುಡಾ ಹಗರಣದ ದಾಖಲೆಗಳನ್ನು ತೆಗೆಸಿದ್ದೇ ಡಿಸಿಎಂ ಡಿಕೆ ಶಿವಕುಮಾರ್ ಎಂದು ಸ್ಪೋಟಕ ಹೇಳಿಕೆ ನೀಡಿದರು.
ಇಂದು ಬಳ್ಳಾರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಇಳಿಸಲು ಸಾಧ್ಯವಿಲ್ಲ. ವರಿಷ್ಠರು ಸಿದ್ದರಾಮಯ್ಯ ಅವರನ್ನು ಇಳಿಸುವ ಪ್ರಯತ್ನ ಮಾಡುವುದಿಲ್ಲ.ಅವರನ್ನು ಇಳಿಸಿದರೆ ಸರ್ಕಾರ ಬೀಳುತ್ತೆ ಅಂತ ಭಯ ಇದೆ ಎಂದು ಬಳ್ಳಾರಿಯಲಿ ಸಿಎಂ ಪರ ಶಾಸಕ ಜನಾರ್ಧನ್ ರೆಡ್ಡಿ ಬ್ಯಾಟಿಂಗ್ ಮಾಡಿದರು.
ಮುಂದುವರೆದು ಬಿಜೆಪಿ ಕೂಡ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವ ಯತ್ನ ಮಾಡಿಲ್ಲ. ಕಾಂಗ್ರೆಸಿಗರೇ ಸಿದ್ದರಾಮಯ್ಯರನ್ನು ಇಳಿಸಲು ಯತ್ನಿಸುತ್ತಿದ್ದಾರೆ. ಮುಡಾ ಹಗರಣ ದಾಖಲೆ ಡಿಕೆ ಅವರೇ ತೆಗೆಸಿದ್ದಾರೆ.ಅಧಿಕಾರದಲ್ಲಿ ಇದ್ದವರೇ ಆ ರೀತಿ ದಾಖಲೆ ತೆಗೆಯಲು ಸಾಧ್ಯ ಈ ವಿಚಾರ ಮೈಸೂರಿನ ಪ್ರತಿ ಮನೆಮನೆಗೂ ಗೊತ್ತಿದೆ ಎಂದು ಶಾಸಕ ಜನಾರ್ಧನ ರೆಡ್ಡಿಯವರು ಹೊಸ ಬಾಂಬ್ ಸಿಡಿಸಿದ್ದಾರೆ.