ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಇಡಿ ನೋಟಿಸ್ ನೀಡಿದೆ.
ಮುಡಾ ಹಗರಣದ ವಿಚಾರಣೆ ನಡೆಸುತ್ತಿರುವ ED ಇದೀಗ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಈ ಮೂಲಕ ಮುಡಾ ಹಗರಣದಲ್ಲಿ ಮತ್ತೊಂದು ತಿರುವು ಸಿಕ್ಕಂತಾಗಿದೆ. ಇಂದು ಮುಡಾ ಹಗರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಇಂದು ಅರ್ಜಿಯ ವಿಚಾರಣೆ ನಡೆಯುತ್ತಿರುವ ಹೊತ್ತಲ್ಲೇ ವಿಚಾರಣೆಗೆ ಹಾಜರಾಗುವಂತೆ ಸಿಎಂ ಪತ್ನಿ ಪಾರ್ವತಿ ಅವರಿಗೆ ಇಡಿ ನೋಟಿಸ್ ನೀಡಿದೆ.
ಇನ್ನು ಇಂದು ಲೋಕಾಯುಕ್ತ ಎಸ್ಪಿ ಟಿ.ಜೆ. ಉದೇಶ್ ನೇತೃತ್ವದ ತಂಡ ಮೂರು ತಿಂಗಳಿಂದ ಮುಡಾ ಪ್ರಕರಣ ಸಂಬಂಧ ಚುನಾಯಿತ ಪ್ರತಿನಿಧಿಗಳು ಸೇರಿದಂತೆ ಅಧಿಕಾರಿಗಳ ವಿಚಾರಣೆ ನಡೆಸಿದೆ. ಮುಡಾ ಕಚೇರಿಯಲ್ಲಿನ ಸಂಬಂಧಿತ ದಾಖಲೆ, ಸಾಮಾನ್ಯ ಸಭೆ ನಡಾವಳಿ ಪರಿಶೀಲಿಸಿ ಅಗತ್ಯ ಮಾಹಿತಿ ಸಂಗ್ರಹಿಸಿ ತನಿಖಾ ವರದಿ ಸಿದ್ದಪಡಿಸಿ ಹೈಕೋರ್ಟ್ ಗೆ ಸಲ್ಲಿಸಿದೆ.