ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಯಾವುದೇ ಕ್ಷಣದಲ್ಲೂ ಸಿಎಂ ಸಿದ್ದರಾಮಯ್ಯ ಇಡಿಯಿಂದ ನೋಟಿಸ್ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.
ಮುಡಾ ಹಗರಣದ ವಿಚಾರಣೆ ನಡೆಸುತ್ತಿರುವ ಇಡಿ ಅಧಿಕಾರಿಗಳು ಯಾವುದೇ ಕ್ಷಣದಲ್ಲೂ ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿಗೆ ನೋಟಿಸ್ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (Mysuru Urban Development Authority- MUDA ) ನಿವೇಶನ ಹಂಚಿಕೆ ಹಗರಣದಲ್ಲಿ ಸಿಎಂ ಮತ್ತು ಇತರರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ನ್ಯಾಯಾಲಯದ ಆದೇಶದ ಮೇರೆಗೆ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್.27ರಂದು ಎಫ್ ಐಆರ್ ದಾಖಲಿಸಿದ್ದರು.
ಮೈಸೂರಿನ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್ಐಆರ್ನಲ್ಲಿ ಸಿದ್ದರಾಮಯ್ಯ ಅವರನ್ನು ಎ1 ಆರೋಪಿ, ಅವರ ಪತ್ನಿ ಬಿ.ಎಂ.ಪಾರ್ವತಿ ಅವರನ್ನು ಎ2, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಎ3 ಮತ್ತು ದೇವರಾಜು ಅವರನ್ನು ಎ4 ಆರೋಪಿಯನ್ನಾಗಿ ಹೆಸರಿಸಲಾಗಿದೆ. ಮುಡಾ ಭೂ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸ್ ತನಿಖೆಗೆ ಬೆಂಗಳೂರಿನ ವಿಶೇಷ ನ್ಯಾಯಾಲಯ ಸೆಪ್ಟೆಂಬರ್ 25 ರಂದು ಆದೇಶಿಸಿತ್ತು.