ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಬಳಿಕ ಇದೀಗ ಸಚಿವ ಭೈರತಿ ಸುರೇಶ್ ಗೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದೆ.
ಮುಡಾ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಚಿವ ಭೈರತಿ ಸುರೇಶ್ ಗೆ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ನೋಟಿಸ್ ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಭೈರತಿ ಸುರೇಶ್ ಅವರು ನವರಾತ್ರಿ ಬಳಿಕ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ವಿಚಾರಣೆಗೆ ದೂರುದಾರ ಸ್ನೇಹಮಯಿ ಕೃಷ್ಣ ಹಾಜರಾಗಿದ್ದಾರೆ. ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಇಡಿಗೆ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಇಸಿಐಆರ್ ಕೂಡ ದಾಖಲಿಸಲಾಗಿತ್ತು. ಈ ಪ್ರಕರಣ ಸಂಬಂಧ ಸೂಕ್ತ ದಾಖಲೆಗಳನ್ನು ಸಲ್ಲಿಸುವಂತೆ, ವಿಚಾರಣೆಗೆ ಹಾಜರಾಗುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಇಡಿ ಸಮನ್ಸ್ ಜಾರಿಗೊಳಿಸಿದ್ದು, ಇಂದು ಸ್ನೇಹಮಯಿ ಕೃಷ್ಣ ಅವರು ಇಡಿ ವಿಚಾರಣೆಗೆ ಹಾಜರಾಗಿದ್ದಾರೆ.