ಬೆಂಗಳೂರು : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಈಗಾಗಲೇ ಶೋಕಾಸ್ ನೋಟಿಸ್ ನೀಡಿರುವ ರಾಜ್ಯಪಾಲರು ಇಂದು ಮತ್ತೊಂದು ನೋಟಿಸ್ ನೀಡುವ ಸಾಧ್ಯತೆ ಇದೆ.
ನಿನ್ನೆಯಷ್ಟೇ ಬೆಂಗಳೂರಿಗೆ ಆಗಮಿಸಿರುವ ರಾಜ್ಯಪಾಲ ಗೆಹ್ಲೋಟ್ ಅವರು ಇಂದು ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ನೋಟಿಸ್ ನೀಡುವ ಸಾಧ್ಯತೆ ಇದೆ. ಸಂಪುಟ ಸಭೆಯ ನಿರ್ಧಾರ ಆಧರಿಸಿ ಮತ್ತೊಂದು ನೋಟಿಸ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಮುಡಾ ಹಗರಣ ಸಂಬಂಧ ರಾಜ್ಯಪಾಲರು ತಮಗೆ ನೀಡಿರುವ ಶೋಕಾಸ್ ನೋಡಿಸ್ ಕುರಿತಂತೆ ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಬರಲಿ ನೋಡೋಣ, ಶೋಕಾಸ್ ನೋಟಿಸ್ ವಾಪಸ್ ಪಡೆಯಬೇಕೆಂದು ಹೇಳಿದ್ದೇನೆ ಎಂದರು.
ಅಬ್ರಾಹಂ ಕೊಟ್ಟ ದೂರು ರಿಜೆಟ್ ಮಾಡಬೇಕು ಎಂದು ರಾಜ್ಯಪಾಲರಿಗೆ ಹೇಳಿದ್ದೇನೆ. ನೋಡೋಣ ರಾಜ್ಯಪಾಲರು ಯಾವ ತೀರ್ಮಾನ ತೆಗೆದುಕೋಳ್ಳತ್ತಾರೆ. ಮುಂದೆ ಕಾನೂನಾತ್ಮಕ ಹಾಗೂ ರಾಜಕೀಯ ಹೋರಾಟಕ್ಕೆ ಸಿದ್ಧವಾಗಿದ್ದೇನೆ ಎಂದು ತಿಳಿಸಿದ್ದಾರೆ.