ಬೆಂಗಳೂರು: ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಂತ ವಿಚಾರವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಿದ್ದಂತ ರಿಟ್ ಅರ್ಜಿಯ ವಿಚಾರಣೆ ನಡೆಯಿತು. ಸಿಎಂ ಸಿದ್ದರಾಮಯ್ಯ ಪರ ವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು ವಿಚಾರಣೆಯನ್ನು ಇಂದು ಮಧ್ಯಾಹ್ನ 2.30 ಕ್ಕೆ ಮುಂದೂಡಿದೆ.
ಇಂದು ಹೈಕೋರ್ಟ್ ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನೊಳಗೊಂಡಂತ ಏಕಸದಸ್ಯ ನ್ಯಾಯಪೀಠದಲ್ಲಿ ಸಿಎಂ ಸಿದ್ಧರಾಮಯ್ಯ ತಮ್ಮ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದಂತ ರಿಟ್ ಅರ್ಜಿಯ ವಿಚಾರಣೆ ನಡೆಸಲಾಯಿತು. ಹೈಕೋರ್ಟ್ ನ್ಯಾಯಪೀಠದ ಮುಂದೆ ಅಭಿಷೇಕ್ ಮನು ಸಿಂಘ್ವಿ ಅವರು ವಾದಿಸಿದರು.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್ 19 ರಂದು ಹೈಕೋರ್ಟಿಗೆ 712 ಪುಟಗಳ ರಿಟ್ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ನಲ್ಲಿ ಈ ಒಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ವಿಚಾರಣೆಯನ್ನು ಇಂದು ಮಧ್ಯಾಹ್ನ 2.30 ಕ್ಕೆ ಮುಂದೂಡಿದ್ದಾರೆ.